ನ್ಯೂಸ್ ನಾಟೌಟ್: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನ.15 ರಂದು ನಡೆದ ಹೋರಾಟ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ರಸ್ತೆ ತಡೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಸಯ್ಯದ್ ಮೀರಾನ್ ಸಾಹೇಬ್ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಪಿಎಸ್ ಐ ಅವಿನಾಶ್ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಅಪರಾಧ ಸಂಖ್ಯೆ: ಅ.ಕ್ರ: 121/2024 ಕಲಂ: 189(2)126(2),285, ಜೊತೆಗೆ 190 BNS 2023ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.