ನ್ಯೂಸ್ ನಾಟೌಟ್: ಕೆಪಿಎಸ್ಸಿ(KPSC) ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಪಿಡಿಒ (PDO) ಸಾಮಾನ್ಯ ಪ್ರಶ್ನೆ ಪತ್ರಿಕೆ ಪರೀಕ್ಷೆಯಲ್ಲಿ ಕೆಪಿಎಸ್ಸಿ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಒಂದೇ ಕೋಣೆಯಲ್ಲಿ ಒಟ್ಟಿಗೆ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದು, ಆ 24 ಅಭ್ಯರ್ಥಿಗಳ ಮಧ್ಯೆ ಕೇವಲ 12 ಪ್ರಶ್ನೆ ಪತ್ರಿಕೆ (Question Paper) ನೀಡುವ ಮೂಲಕ ಯಡವಟ್ಟು ಮಾಡಿದೆ ಎನ್ನಲಾಗಿದೆ.
ಇದರಿಂದಾಗಿ ಅಭ್ಯರ್ಥಿಗಳು ಪಿಡಿಒ ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದ ಘಟನೆ ರಾಯಚೂರಿನಲ್ಲಿ (Raichuru) ನಡೆದಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು.
ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದಿದ್ದ ಸುಮಾರು 840ಕ್ಕೂ ಅಧಿಕ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ರಸ್ತೆ ಬಂದ್ ಮಾಡಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಿಂಧನೂರು ತಹಸೀಲ್ದಾರ್ ಅರುಣ್ ಕುಮಾರ್ ಅಭ್ಯರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ.
ತಹಸೀಲ್ದಾರ್ ಮನವೊಲಿಸಿದ್ರೂ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹಿಂದೇಟು ಹಾಕಿದರು. ಅಲ್ಲದೆ ಪ್ರಶ್ನೆ ಪತ್ರಿಕೆ ಇಲ್ಲದೆ ಪರೀಕ್ಷೆ ಹೇಗೆ ಬರೆಯುವುದು ಎಂದು ಅಭ್ಯರ್ಥಿಗಳು ವಾಗ್ವಾದ ನಡೆಸಿದ್ದಾರೆ.
Click