ನ್ಯೂಸ್ ನಾಟೌಟ್: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆ ಎಫ್ ಸಿ ಸಿ) ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್ ಆಯ್ಕೆಯಾಗಿದ್ದಾರೆ.
ಶನಿವಾರ ಬೆಳಗ್ಗೆ ಮಂಡಳಿಯ ಸರ್ವಸದಸ್ಯರ ಸಭೆಯ ಬಳಿಕ, ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ 2022–23ನೇ ಸಾಲಿನ 64ನೇ ವರ್ಷದ ವಾರ್ಷಿಕ ಚುನಾವಣೆ ನಡೆಯಿತು. ಶೇ 62 ಮತದಾನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರಾದ ಸಾ.ರಾ.ಗೋವಿಂದು ಹಾಗೂ ಭಾ.ಮ.ಹರೀಶ್ ಅವರ ನಡುವೆ ತೀವ್ರ ಪೈಪೋಟಿಯಿತ್ತು. ಅತ್ಯಧಿಕ ಮತಗಳಿಂದ ಭಾ.ಮ.ಹರೀಶ್ ಗೆಲುವು ಸಾಧಿಸಿದರು.