ನ್ಯೂಸ್ ನಾಟೌಟ್: ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಡಿ.ಕೆ. ಅವರು ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ನ.11 ರಿಂದ ನ.21ರ ತನಕ ಬೆಂಗಳೂರಿನ ಯಲಹಂಕದಲ್ಲಿ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ Scientific Aid Investigation Police Portriate ವಿಭಾಗದಲ್ಲಿ ನಡೆದಿತ್ತು. ಇದರಲ್ಲಿ ಸಂತೋಷ್ ಅತ್ಯುತ್ತಮ ನಿರ್ವಹಣೆಯ ಮೂಲಕ ಚಿನ್ನದ ಪದಕ ಪಡೆದುಕೊಂಡರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಆಗಿರುವ ಅಲೋಕ್ ಮೋಹನ್ ಅವರಿಂದ ಗೌರವ ಪಡೆದುಕೊಂಡಿದ್ದಾರೆ, ಸದ್ಯ ಸಂತೋಷ್ ಅವರು ಚಿನ್ನದ ಪದಕದೊಂದಿಗೆ ಜನವರಿಯಲ್ಲಿ ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂತೋಷ್ ಅವರು ತೊಡಿಕಾನ ಅಮೆತೋಟ ಕೃಷ್ಣಪ್ಪ ಪೂಜಾರಿ ಹಾಗೂ ವಾರಿಜಾ ದಂಪತಿಯ ನಾಲ್ಕನೇ ಪುತ್ರರಾಗಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ತೊಡಿಕಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದುಕೊಂಡಿದ್ದಾರೆ. ಹೈಸ್ಕೂಲ್ ಮತ್ತು ಪಿಯುಸಿಯನ್ನು ಅರಂತೋಡು ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಹಾಗೂ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ ಶಿಕ್ಷಣ ಪೂರೈಸಿದ್ದಾರೆ. ಕಳೆದ 16 ವರ್ಷದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.