ನ್ಯೂಸ್ ನಾಟೌಟ್: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ನಾಳೆ (ನ.26) ನಡೆಯಲಿದೆ.
ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಪೂರ್ಣಾನುಗ್ರಹದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬೆಳಗ್ಗೆ 10.30ಕ್ಕೆ ಬಿಜಿಎಸ್ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸುಮಾರು 25 ಮಂದಿ ಸಾಧಕರು ಪ್ರಶಸ್ತಿ ಪಡೆಯಲಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಪರಮಪೂಜ್ಯ ಸ್ವಾಮೀಜಿಗಳಾದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ಇರಲಿದ್ದಾರೆ.
ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹೊಸದಿಗಂತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಮಾಜಿ ಶಾಸಕ ಸಂಜೀವ ಮಠಂದೂರು, ಮ.ನ.ಪಾ ಸದಸ್ಯೆ ಸುಮಂಗಳ ಉಪಸ್ಥಿತರಿರಲಿದ್ದಾರೆ.