ನ್ಯೂಸ್ ನಾಟೌಟ್: ಮುಂಜಾನೆ 5 ಗಂಟೆಗೆ ಶಬ್ದಮಾಲಿನ್ಯ ಉಂಟುಮಾಡುವ ಧ್ವನಿವರ್ಧಕಗಳ ನಿರ್ಬಂಧದ ಕುರಿತಾದ ಸರ್ಕಾರದ ಆದೇಶವನ್ನು ಯಾರೂ ಪಾಲಿಸುತ್ತಿಲ್ಲ. ನನಗೆ ಅಧಿಕಾರ ನೀಡಿದರೆ 24 ಗಂಟೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುತ್ತೇನೆ. ಪಾಲಿಸದವರಿಗೆ ಗುಂಡು ಹೊಡೆಯುತ್ತೇನೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಶಬ್ದಮಾಲಿನ್ಯ ಉಂಟು ಮಾಡುವ ಧ್ವನಿವರ್ಧಕಗಳ ನಿರ್ಬಂಧದ ಕುರಿತಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಸರಕಾರ 15 ದಿನಗಳ ಅವಕಾಶ ನೀಡಿದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಆದೇಶ ಕಸದಬುಟ್ಟಿ ಸೇರಿದೆ. ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಲಾಗದಿದ್ದರೆ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿದು, ನನಗೆ ಅಧಿಕಾರ ನೀಡಲಿ ಎಂದು ಅಗ್ರಹಿಸಿದರು.