ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಮಾನವಿಕ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ ಅಂತರ್ ತರಗತಿ ಫೆಸ್ಟ್ (ಸಂಭ್ರಮ – 2k24) ಗುರುವಾರ (ನ. 28) ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ. ರೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುಷ್ಪರಾಜ್ ಕೆ. ಮಾತನಾಡಿ, ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಪ್ರದರ್ಶಿಸಲು ಇಂಥ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಗೌರವ ಅತಿಥಿಗಳಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ| ರುದ್ರಕುಮಾರ್ ಎಂ ಎಂ, ವಾಣಿಜ್ಯ ಮತ್ತು ಮಾನವಿಕ ಸಂಘದ ಸಂಚಾಲಕರು ಹಾಗೂ ಉಪನ್ಯಾಸಕರಾದ ಸಾವಿತ್ರಿ ಕೆ. ಹಾಗೂ ರೇಷ್ಮ ಎಂ ಹಾಗೂ ಸಾಂಸ್ಕೃತಿಕ ಸಂಘದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ವಿನಯ್ ಎನ್.ಬಿ ಉಪಸ್ಥಿತರಿದ್ದರು.
ಶರಣ್ಯ ಮತ್ತು ಬಳಗ ಪ್ರಾರ್ಥಿಸಿ, ಉಪನ್ಯಾಸಕರಾದ ಸಾವಿತ್ರಿ ಕೆ. ಸ್ವಾಗತಿಸಿದರು, ರೇಷ್ಮ ಎಂ. ವಂದಿಸಿ ಬೇಬಿ ವಿದ್ಯಾ ಪಿ ಬಿ ಹಾಗೂ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.