ನ್ಯೂಸ್ ನಾಟೌಟ್: ಬ್ರಹ್ಮಗಂಟು ಸೀರಿಯಲ್ ನಲ್ಲಿ ನಟಿಸಿ ಖ್ಯಾತರಾಗಿದ್ದ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದೆ.
2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್ ನಲ್ಲಿ ಸೆಟಲ್ ಆಗಿದ್ದರು. ಇತ್ತೀಚೆಗೆ ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿಬಂದಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ನಗು ನಗುತ್ತಾ ಇರೋ ಚೆಂದದ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ನಡೆದಿದೆ. ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ಶೋಭಿತಾ ನಟಿಸಿದ್ದರು. ಜನಪ್ರಿಯ ಬ್ರಹ್ಮಗಂಟು ಸೀರಿಯಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿ ಕೆಲಸ ಮಾಡಿದ್ದರು.
Click