ನ್ಯೂಸ್ ನಾಟೌಟ್: ಫೆಂಗಲ್ ಚಂಡಮಾರುತದ ಪರಿಣಾಮ ಚಳಿಗಾಲದಲ್ಲೂ ಕೂಡ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದೆ. ಮುಂಜಾಗ್ರಾತಾ ಕ್ರಮವಾಗಿ ನಾಳೆ(ಡಿಸೆಂಬರ್ 03) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಅವಾಂತರ ಸೃಷ್ಟಿಸುತ್ತಿರುವ ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ 2 ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ನಾಳೆಯೂ ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ.