ನ್ಯೂಸ್ ನಾಟೌಟ್: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪ್ರವಾಹದ ಅಬ್ಬರ ಮುಂದುವರಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಮನೆ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ.
ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.
ಫೆಂಗಲ್ ಚಂಡಮಾರುತವು ರಾಜ್ಯದ ಹಲವೆಡೆ ಭಾರೀ ಹಾನಿಯನ್ನುಂಟು ಮಾಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ. ಹಾನಿಯನ್ನು ಎದುರಿಸಲು ಹೆಚ್ಚಿನ ಹಣ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. “ಫೆಂಗಲ್ ಚಂಡಮಾರುತವು ತಮಿಳುನಾಡಿನ 14 ಜಿಲ್ಲೆಗಳಲ್ಲಿ ಹೆಚ್ಚು ಹಾನಿಯನ್ನುಂಟುಮಾಡಿದೆ.
1.5 ಕೋಟಿ ಜನರ ಮೇಲೆ ಪರಿಣಾಮ ಬೀರಿದ್ದು, 2.11 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮುಳುಗಿಸಿದ್ದಲ್ಲದೆ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ವಿನಾಶದ ಪ್ರಮಾಣವನ್ನು ಗಮನಿಸಿದರೆ, ತುರ್ತು ಮರುಸ್ಥಾಪನೆ ಮತ್ತು ಪುನರ್ವಸತಿ ಪ್ರಯತ್ನಗಳಿಗೆ ಸಹಾಯ ಮಾಡಲು ತಕ್ಷಣವೇ ಎನ್ಡಿಆರ್ಎಫ್ನಿಂದ 2,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ” ಎಂದು ಎಂಕೆ ಸ್ಟಾಲಿನ್ ಹೇಳಿದ್ದಾರೆ.
Click here to follow us on Facebook
Click