ನ್ಯೂಸ್ ನಾಟೌಟ್: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎನ್ನುವವರು ಖಾಸಗಿ ದೂರು ದಾಖಲಿಸಿದ್ದರು. ಇದನ್ನು ರದ್ದುಪಡಿಸಿವಂತೆ ನಿರ್ಮಲಾ ಸೀತಾರಾಮನ್ ಮತ್ತು ನಳಿನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು(ಡಿ.3) ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯ ಪೀಠ, ಎಫ್ಐಆರ್ ರದ್ದುಪಡಿಸಿ ಆದೇಶ ಹೊರಡಿಸಿದೆ.
Click