ನ್ಯೂಸ್ ನಾಟೌಟ್: ಸುಳ್ಯದಲ್ಲಿ ಜೂನ್ 6 ರಂದು ರಾತ್ರಿ ನಡೆದಿದ್ದ ಮಹಮ್ಮದ್ ಶಾಯಿ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣವನ್ನು ಭೇದಿಸಿ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಕೊಡಗು ಕುಶಾಲನಗರದ ಕೆ. ಜಯನ್ (38), ಮಡಿಕೇರಿಯ ವಿನೋದ್ (34) ಎಚ್,ಎಸ್ ಮನೋಜ್ ( 25) ಬಂಧಿತರೆಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಎರಡು ಪಿಸ್ತೂಲ್, ಬುಲೆಟ್ಸ್, ಸ್ಕಾರ್ಫಿಯೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಳೆ ವೈಷಮ್ಯದಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇದರಲ್ಲಿ ಜಯನ್ ಎಂಬಾತ ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಹತ್ಯೆಯ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.