ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ವೊಬ್ಬರು ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ (ಡಿ.7) ರಾತ್ರಿ ನಡೆದಿದೆ.
ಅಧಿಸೂಚಿತ ಅರಣ್ಯ ವೀಕ್ಷಕ, ಎಂ ಆರ್ ವಾಚರ್ ಸದಾಶಿವ ಅನ್ನುವವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಅವರಿಗೆ ಸುಮಾರು 50 ವರ್ಷ ಆಗಿರಬಹುದು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿಯೂ ಆಗುವುದಿಲ್ಲ ಎಂದು ಮನೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ಅಸು ನೀಗಿದರು ಎಂದು ತಿಳಿದು ಬಂದಿದೆ.
Click