21.6 C
Sullia
Sunday, March 8, 2026

ಸುಳ್ಯ: ಎನ್ನೆಂಸಿಯಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ನ್ಯೂಸ್ ನಾಟೌಟ್ :ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ರಕ್ಷಕ ಶಿಕ್ಷಕ ಸಂಘ ಬಹಳ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ರಕ್ಷಕ ಶಿಕ್ಷಕ ಸಂಘದ 2025-26ನೇ ಶೈಕ್ಷಣಿಕ ವರ್ಷದ ಪೋಷಕ ಪ್ರತಿನಿಧಿಗಳನ್ನು ಆರಿಸಿ ಅವರ ಮೂಲಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಮರುಆಯ್ಕೆಯಾದರು, ಉಪಾಧ್ಯಕ್ಷರಾಗಿ ಶಿವಕುಮಾರ್ ಆಚಾರ್ಯ ಆಯ್ಕೆಗೊಂಡರು.

ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದರು.

ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಧರ್ ವಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ತೃತೀಯ ಬಿಎ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಭೌತಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಕೆ ಸಿ ವಂದಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲದೀಪ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ವಿಷ್ಣುಪ್ರಶಾಂತ್, ಹರಿಪ್ರಸಾದ್, ನಿಶ್ಮತಾ ಇನ್ನಿತರರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಪೋಷಕ ವೃಂದದವರು, ಭೋದಕ ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭೆಯ ನಂತರ ಎಲ್ಲಾ ಪೋಷಕರು ಅವರ ಮಕ್ಕಳ ಪ್ರಗತಿಯ ಬಗ್ಗೆ ಶಿಕ್ಷಕರ ಜೊತೆ ಸಮಾಲೋಚಿಸಿದರು.

Related Articles

LEAVE A REPLY

Please enter your comment!
Please enter your name here

Latest Articles