ನ್ಯೂಸ್ ನಾಟೌಟ್: ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕುಶಾಲನಗರ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಅಪ್ಪಣ್ಣ ಎಂಬುವವನೆ ಬಂಧಿತ ಆರೋಪಿಯಾಗಿದ್ದಾನೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಕಡೆಯಿಂದ ಕುಶಾಲನಗರದ ಮೂಲಕ ಮೈಸೂರಿಗೆ ಮರ ಸಾಗಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಅರಣ್ಯ ಅಧಿಕಾರಿಗಳು ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ತಪಾಸಣೆ ನಡೆಸಿದ್ದಾರೆ ಈ ಸಂದರ್ಭದಲ್ಲಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಬೃಹತ್ ಗಾತ್ರದ 5 ಬೀಟೆ ನಾಟಗಳನ್ನ ಅಕ್ರಮವಾಗಿ ಸಾಗಿಸುತ್ತಿರೋದು ಬೆಳಕಿಗೆ ಬಂದಿದ್ದು. ಮಾಲು ಸಹಿತ ಆರೋಪಿಯನ್ನ ಬಂಧಿಸುವಲ್ಲಿ ಕುಶಾಲನಗರ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹಾಗೂ ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಮಾರ್ಗದರ್ಶನದಲ್ಲಿ ಕುಶಾಲನಗರ ಅರಣ್ಯ ವಲಯಾಧಿಕಾರಿ ಶಿವರಾಂ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಓಮ್ಮಿ ಕಾರು ಸೇರಿ 2.50 ಲಕ್ಷ ಮೌಲ್ಯದ ಮಾಲನ್ನ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಕುಶಾಲನಗರ ಅರಣ್ಯ ವಲಯಾಧಿಕಾರಿ ಕೆ.ವಿ.ಶಿವರಾಂ, ಉಪ ವಲಯ ಅರಣ್ಯಾಧಿಕಾರಿಗಳಾದ ಕೆ.ಎನ್.ದೇವಯ್ಯ, ಅನಿಲ್ ಡಿಸೋಜ, ಕೆ.ಎಸ್.ಸುಬ್ರಾಯ, ಕೆ.ಪಿ.ರಂಜನ್, ಕೆ.ಎ.ವಿಲಾಸ್, ಸಿಬ್ಬಂದಿಗಳಾದ ಮಂಜೇಗೌಡ, ಸಿದ್ದರಾಮ ನಾಟಿಕಾರ್, ಆರ್ಆರ್ಟಿ ಸಿಬ್ಬಂದಿ ಧರ್ಮ ಪಾಲ್ಗೊಂಡಿದ್ದರು.