ನ್ಯೂಸ್ ನಾಟೌಟ್: ಎಸ್ ಎಂ ಕೃಷ್ಣ ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿ ಕಣ್ಣೀರು ಹಾಕಿದರು.ಇವತ್ತು ಬೆಳಗ್ಗೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು.
ಎಸ್ಎಂ ಕೃಷ್ಣ (SM Krishna) ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಮೋದಿ ಅವರು ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕ. ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದವರು ಎಂದು ಮೋದಿ ಹೇಳಿದ್ದಾರೆ.