ನ್ಯೂಸ್ ನಾಟೌಟ್ : ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಪೊಲೀಸರು ತಳ್ಳಿರುವ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗಿದೆ.
ಡಿಕೆ ಸುರೇಶ್ ಜತೆ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯದ ಕಾಂಗ್ರೆಸ್ ನ ಪ್ರಮುಖ ನಾಯಕರೊಂದಿಗೂ ದೆಹಲಿ ಪೊಲೀಸರು ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊ ಪ್ರಕಟಿಸಿದ್ದು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಸರಕಾರದ ವಿರುದ್ಧದ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯ ಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.