ಕ್ರೈಂವಿಡಿಯೋವೈರಲ್ ನ್ಯೂಸ್

ಶಬರಿಮಲೆ ದೇಗುಲದ ಸ್ಕೈ ವಾಕ್ ಮೇಲಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.16 ರಾತ್ರಿ ನಡೆದಿದೆ.

ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕುಮಾರ್‌ ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕುಮಾರ್ ಕುಟುಂಬಸ್ಥರು ಶಬರಿಮಲೆಗೆ ತೆರಳಿದ್ದಾರೆ.

ಇನ್ನೂ ಕುಮಾರ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸೋಮವಾರವಷ್ಟೇ ಪತಿ ಪೋನ್ ಮಾಡಿ ಮಾತನಾಡಿದ್ದರು. ಮನೆಯಲ್ಲೂ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ. ಸ್ನೇಹಿತರ ಜೊತೆ ದೇವಾಲಯಕ್ಕೆ ಹೋಗಿದ್ದವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಸ್ನೇಹಿತರು ಅವರು ಒಬ್ಬರನ್ನೇ ಬಿಟ್ಟು ಎಲ್ಲಿಹೋಗಿದ್ದರು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.

Click

https://newsnotout.com/2024/12/police-supreme-court-kannada-news-commisioner-djh/
https://newsnotout.com/2024/12/kananda-news-chattisghar-c-abhikakapura-anada-yadav/
https://newsnotout.com/2024/12/tirupathi-darshana-pass-kannada-news-viral-news-d-karnataka/
https://newsnotout.com/2024/12/man-found-dead-in-nettana-from-rail-kannada-news/
https://newsnotout.com/2024/12/kalmakaru-sullia-kannada-news-ayyappa-maladhari-elephant-d/

Related posts

ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹುಚ್ಚ ವೆಂಕಟ್..! ಯಾವುದು ಆ ಸಿನಿಮಾ..?

4 ಲಕ್ಷಕ್ಕೆ ಮಗು ಮಾರಾಟ ಮಾಡಿದ 6 ಮಂದಿ ಅರೆಸ್ಟ್..! ನಕಲಿ ಜನನ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳು ವಶಕ್ಕೆ..!

ಕಾಂಗ್ರೆಸ್‌ ಶಾಸಕರಿಗೆ ಕುಮಾರಸ್ವಾಮಿ ಧಮ್ಕಿ ಹಾಕಿದ್ದಾರೆ ಎಂದ ಡಿಸಿಎಂ..! ಹೆಚ್.ಡಿ.ಕೆ ಕೊಟ್ಟ ಆಫರ್ ಗಳ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದೇನು..?