ನ್ಯೂಸ್ ನಾಟೌಟ್ : ಮಂಡೆಕೋಲು ಗ್ರಾಮ ಪಂಚಾಯತಿಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆಯ ಕ್ಯಾಂಪ್ ಇಂದು (ಡಿ.18) ಕಾರ್ಯಕ್ರಮ ನಡೆಯಿತು.
ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ.) ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮಂಡೆಕೋಲು, ಗ್ರಾಮ ಪಂಚಾಯತ್ ಮಂಡೆಕೋಲು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ನಡೆದಿದೆ.
ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಕೆ. ಉದ್ದಂತಡ್ಕ ಎಂಬವರು ಉದ್ಘಾಟನೆ ಮಾಡಿ ಶುಭ ಹಾರೈಸಿದರು.
ಶಿಬಿರದಲ್ಲಿ ಬರುವ ರೋಗಿಗಳಿಗೆ ಕಣ್ಣಿನ ಹೊರೆ ಚಿಕಿತ್ಸೆಯ ಅವಶ್ಯವಿದ್ದಲ್ಲಿ ಅಂಥವರನ್ನು ಅದೇ ದಿನ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮರುದಿವಸವೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸುವ ವ್ಯವಸ್ಥೆ ಮಾಡಲಾಗಿತ್ತು. ಕಣ್ಣಿನ ಪೊರೆ ಚಿಕಿತ್ಸೆಯನ್ನು ಮತ್ತು ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಶಿಬಿರದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಉಪಸ್ಥಿತರಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಕಣ್ಣಿನ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಮಹೇಶ್ ಬಾಬು, ಮಂಡೆಕೋಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರತಿಮಾ ಹೆಬ್ಬಾರ್, ಮಂಡೆಕೋಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ ಕಣೆಮರಡ್ಕ ಉಪಸ್ಥಿತರಿದ್ದರು.
Click