ಕರಾವಳಿಕ್ರೈಂವೈರಲ್ ನ್ಯೂಸ್

ಸುರತ್ಕಲ್‌: ಅಡುಗೆ ಮನೆ ಗ್ಯಾಸ್‌ ಸೋರಿಕೆಯಾಗಿ ಮಹಿಳೆಯರ ಮೇಲೆ ಹೊತ್ತಿಕೊಂಡ ಬೆಂಕಿ..! ಮೈಗೆ ಅಂಟಿದ್ದ ಸೀರೆಯನ್ನು ಕತ್ತರಿಸಿ ರಕ್ಷಿಸಿದ ಸ್ಥಳೀಯರು..!

ನ್ಯೂಸ್ ನಾಟೌಟ್: ಸುರತ್ಕಲ್‌ ನ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಾಯಗೊಂಡವರು ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗ್ಯಾಸ್‌ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ ಬೆಂಕಿ ಹಚ್ಚುತ್ತಿದ್ದಂತೆ ಏಕಾಏಕಿ ಬೆಂಕಿ ವ್ಯಾಪಿಸಿಕೊಂಡಿತು. ಅವರು ಸಹಾಯಕ್ಕಾಗಿ ಕೂಗಿದಾಗ ಹೊರಗೆ ಬಟ್ಟೆ ಒಗೆಯುತ್ತಿದ್ದ ಪುಷ್ಪಾ ಧಾವಿಸಿ ಬಂದು ಹೊರಗಿನಿಂದ ಬಾಗಿಲು ತೆರೆಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಅವರಿಗೂ ಚಾಚಿತು. ಅವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದವರು ಧಾವಿಸಿ ಇಬ್ಬರನ್ನೂ ಹೊರಗೆಳೆದು ಬೆಂಕಿ ನಂದಿಸಲು ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಸಂತಿ ಧರಿಸಿದ್ದ ಸೀರೆ ಅವರ ಮೈಗೆ ಅಂಟಿಕೊಂಡಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ತೆಗೆಯಬೇಕಾಯಿತು. ಅದಾಗಲೇ ಕೈ, ಮುಖದ ಭಾಗ ಮತ್ತಿತರ ಕಡೆ ಬೆಂಕಿ ತಗುಲಿತ್ತು ಎಂದು ನೆರವಿಗೆ ಧಾವಿಸಿದವರು ತಿಳಿಸಿದ್ದಾರೆ.

ಮನೆ ಯಜಮಾನ ವಾಮನ ಅಯ್ಯಪ್ಪ ವೃತಧಾರಿಯಾಗಿದ್ದು, ಮನೆ ಬಳಿಯಿರುವ ಸಣ್ಣ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿದ್ದರು. ಕೋಣೆಯ ಒಳಗೆ ಮತ್ತೆರಡು ಅನಿಲ ಸಿಲಿಂಡರ್ ಗಳಿದ್ದವು . ಆದರೆ ಅದಕ್ಕೆ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ದುರಂತದಲ್ಲಿ ಮನೆಯ ಛಾವಣಿಯ ಶೀಟ್‌ ಹಾರಿಹೋಗಿ ಸ್ಫೋಟದಂತಹ ಶಬ್ದ ಕೇಳಿಸಿದೆ. ಮನೆಯ ಹೊರಭಾಗಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಘಟನೆಯಿಂದ ಅಪಾರ ಹಾನಿ ಸಂಭವಿಸಿದೆ ಎನ್ನಲಾಗಿದೆ.

Click

https://newsnotout.com/2024/12/news-anchor-kananda-news-video-leak-viral-news-pak/
https://newsnotout.com/2024/12/electric-light-decoration-kannda-news-viral-news-d-student/
https://newsnotout.com/2024/12/electricity-bill-kannada-news-viral-news-govt-to-siddagangha-matta/
https://newsnotout.com/2024/12/kannada-news-women-run-to-hospital-women-hd/
https://newsnotout.com/2024/12/couple-case-in-crow-issue-viral-news-tamilnadu-h/
https://newsnotout.com/2024/12/boat-collition-navy-coastal-guard-viral-news/
https://newsnotout.com/2024/12/bjp-politician-and-rahulgandi-confict-on-protest/

Related posts

ಬೆಳ್ಳಾರೆ: ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ;ಪ್ರಕರಣ ದಾಖಲು,ಮುಂದುವರಿದ ತನಿಖೆ

ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಗಾಂಧಿಯ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದ ಬಿಜೆಪಿ ಅಭ್ಯರ್ಥಿ..! ವಿವಾದಾತ್ಮಕ ಹೇಳಿಕೆಯ ಬಗ್ಗೆ ವಾದ-ಪ್ರತಿವಾದ..!

ಮೈಮೇಲೆ ಅಣಬೆ ಇರುವ ಕಪ್ಪೆ ಎಲ್ಲಾದ್ರು ನೋಡಿದ್ದೀರಾ?ಕಾರ್ಕಳದ ಕೆರೆಯೊಂದರಲ್ಲಿ ವಿಚಿತ್ರ ಕಪ್ಪೆ..!ವಿಶ್ವದಲ್ಲಿ ಇಂತಹ ಜೀವಿ ಇದೇ ಮೊದಲು ಎಂದ ವಿಜ್ಞಾನಿಗಳು..!