ನ್ಯೂಸ್ ನಾಟೌಟ್ : ಉಡುಪಿಯ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆ ಕಾಮಗಾರಿಗಾಗಿ ಅಗೆದಿರುವ ಹೊಂಡಕ್ಕೆ ಕಾರೊಂದು ಬಿದ್ದ ಘಟನೆ ಡಿ.26ರಂದು ರಾತ್ರಿ ನಡೆದಿದೆ.
ಅಂಬಲಪಾಡಿಯಲ್ಲಿ ಅಂಡರ್ ಪಾಸ್ ನಿರ್ಮಿಸಲು ಪಿಲ್ಲರ್ ಗಾಗಿ ಬೃಹತ್ ಹೊಂಡಗಳನ್ನು ತೆಗೆಯಲಾಗಿದ್ದು, ಇಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ ಕಳೆದ ರಾತ್ರಿ ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಕಾರು ಅತೀ ವೇಗದಿಂದ ಬಂದು ಚಾಲಕನ ನಿಯಂತ್ರಣ ತಪ್ಪಿ ಈ ಹೊಂಡಕ್ಕೆ ಬಿದ್ದಿದೆ.
ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎನ್ನಲಾಗಿದೆ.
Click