ನ್ಯೂಸ್ ನಾಟೌಟ್: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಮೂರು ಸೇನಾ ಗೌರವಗಳೊಂದಿಗೆ ಸಿಖ್ ಸಂಪ್ರದಾಯದ ಪ್ರಕಾರ ನಡೆದಿದ್ದು ವಿಶೇಷ. ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.