ಕರಾವಳಿಸುಳ್ಯ

ಸುಳ್ಯ:ರೀಲ್ಸ್ ವಿಚಾರದಲ್ಲಿ ಜಗಳ ,ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

ನ್ಯೂಸ್‌ ನಾಟೌಟ್‌: ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಬಗ್ಗೆ ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಿಂದ ವರದಿಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಣೆಯಾಗಿರುವ ಮಹಿಳೆ ಎಂದು ತಿಳಿದು ಬಂದಿದೆ.

ಪರಿವಾರಕಾನದಲ್ಲಿ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕುಟುಂಬ ವಾಸವಾಗಿತ್ತು.ಮಹಿಳೆ ಪತಿ ರಾಜೇಂದ್ರ (40) ಅವರು ಟೈಲ್ಸ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಗಳು ವೈಷ್ಣವಿ (8 ವರ್ಷ) 2ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಳು 2 ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದಳು ಎಂದು ತಿಳಿದು ಬಂದಿದೆ.

ಕಳೆದ ಒಂದು ವಾರದ ಹಿಂದೆ ಗಂಡನೊಂದಿಗೆ ಮೊಬೈಲ್‌ನಲ್ಲಿ ರೀಲ್ಸ್ ನೋಡಿಕೊಂಡು ಕುಳಿತುಕೊಂಡಿರುವ ವಿಚಾರವಾಗಿ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.ಈ ವೇಳೆ ಮಹಿಳೆ ನಂದಿನಿ ತನ್ನ ತವರು ಮನೆಗೆ ಮಕ್ಕಳೊಂದಿಗೆ ಹೋಗಿ ಬಂದಿದ್ದು,ಜ. 7 ರಂದು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ನಡುವೆ ತನ್ನ ಮನೆಯಿಂದ ತನ್ನ ಮಕ್ಕಳೊಂದಿಗೆ ಕಾಣೆಯಾಗಿರುವುದಾಗಿ ರಾಜೇಂದ್ರ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪುತ್ತೂರು:ಬಿಜೆಪಿ ನಾಯಕರ ವಿರುದ್ಧ ಬ್ಯಾನರ್ , ಚಪ್ಪಲಿ ಹಾರ : ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಮಾರಾಣಾಂತಿಕ ಹಲ್ಲೆ,ಸ್ಥಿತಿ ಗಂಭೀರ

Chaitra Kundapura cheating case: ಸೆ. 19ಕ್ಕೆ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ,ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು

ಸುಳ್ಯವನ್ನು ಬೆಚ್ಚಿಬೀಳಿಸಿದ್ದ ಕಲ್ಲುಗುಂಡಿ ಸಂಪತ್ ಕೊಲೆ ಪ್ರಕರಣ,ಮೂರನೇ ಆರೋಪಿಗೆ ಷರತ್ತು ಬದ್ಧ ಜಾಮೀನು