ನ್ಯೂಸ್ ನಾಟೌಟ್: ಪರೀಕ್ಷೆಯಲ್ಲಿ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದವರು ಇದ್ದಾರೆ. ಸಿಕ್ಕಿ ಬಿದ್ದು ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆಯೂ ನಡೆದಿದೆ. ಇದೀಗ ಇಲ್ಲೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಪರೀಕ್ಷೆಯಲ್ಲಿ ನಕಲು ಮಾಡುವ ವೇಳೆ ವಿದ್ಯಾರ್ಥಿಯೊಬ್ಬ ಇನ್ವಿಜಿಲೇಟರ್ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ಎಂ.ಟೆಕ್ ಪರೀಕ್ಷೆಯಲ್ಲಿ ನಕಲು ಮಾಡುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದು, ಈ ಕೋಪದಲ್ಲಿ ಆತ ಶಿಕ್ಷಕನ ಮೇಲೆಯೇ ಕೈ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ರಾಜಸ್ಥಾನದ ಜೋಧ್ ಪುರದ ಎಂಬಿಬಿ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಶಿಕ್ಷಕನ ಮೇಲೆಯೇ ಕೈ ಮಾಡಿದ್ದಾನೆ. ಎಂ ಟೆಕ್ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿ ಮೊಬೈಲ್ ಬಳಸಿ ನಕಲು ಮಾಡಲು ಯತ್ನಿಸಿದ್ದಾನೆ.
ಈ ದೃಶ್ಯ ಶಿಕ್ಷಕನ ಕಣ್ಣಿಗೆ ಬಿದ್ದಿದ್ದು, ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಆ ವಿದ್ಯಾರ್ಥಿ ಶಿಕ್ಷಕನ ಕೆನ್ನೆಗೆ ಬಾರಿಸಿದ್ದಾನೆ. ನಂತರ ಇವರಿಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಶಾಂತಿ ಕದಡಿದ ಆರೋಪದಲ್ಲಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
Click