ನ್ಯೂಸ್ ನಾಟೌಟ್: ಅಧಿಕಾರಿಯ ಲಂಚದಾಹಕ್ಕೆ ಬೇಸತ್ತ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.
ಗುಜರಾತ್ ನ ಧೋಲ್ಕಾ ಪ್ರದೇಶದಲ್ಲಿ ನಡೆದ ಘಟನೆ ಇದಾಗಿದ್ದು, ನೋಟನ್ನು ಎಸೆಯುವ ಮೂಲಕ ಭ್ರಷ್ಟ ಅಧಿಕಾರಿಯ ವಿರುದ್ಧ ಜನ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರಿ ಕಚೇರಿಯ ಒಳಗೆ ನುಗ್ಗಿ ಕುರ್ಚಿಯ ಮೇಲೆ ಕುಳಿದಿದ್ದ ಭ್ರಷ್ಟ ಅಧಿಕಾರಿಯ ಕುತ್ತಿಗೆಗೆ ಭಿತ್ತಿ ಪತ್ರವನ್ನು ನೇತು ಹಾಕಿ ನೋಟನ್ನು ಎಸೆದು ತಗೊಳ್ಳಿ ಇದನ್ನೂ ತಿನ್ನಿ, ಎಂದು ಹೇಳುವ ಮೂಲಕ ಕೋಪ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಜನವರಿ 9, 2025 ರಂದು ನಡೆದಿದ್ದು ತಡವಾಗಿ ವಿಡಿಯೋ ವೈರಲ್ ಆಗುತ್ತಿದೆ. ಪ್ರತಿಭಟನೆಯಲ್ಲಿ ಜನ ಅಸಲಿ ನೋಟುಗಳನ್ನು ಎಸೆದದ್ದಲ್ಲ ಎಂಬ ಮಾಹಿತಿ ಸಿಕ್ಕಿದೆ.
ಜನವರಿ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.97 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.
Click