ನ್ಯೂಸ್ ನಾಟೌಟ್: ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ಇಂದು(ಜ.16) ನಡೆದಿದೆ.
ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ಚಂದ್ರಮ್ಮ ತನ್ನ ಮಗಳನ್ನು ಕರೆದುಕೊಂಡ ಹೋಗಿ ತೋಟದಲ್ಲಿ ನೋಡಿದಾಗ ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡಿದೆ.
ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
Click