ಕರಾವಳಿ

ಉಳ್ಳಾಲ: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ದರೋಡೆ ಪ್ರಕರಣ..!ಸಿ.ಎಂ.ಸಿದ್ದರಾಮಯ್ಯರಿಗೆ ಪೊಲೀಸರು ಹೇಳಿದ್ದೇನು?

ನ್ಯೂಸ್‌ ನಾಟೌಟ್‌: ಮಂಗಳೂರು ಸಮೀಪದ ಉಳ್ಳಾಲದಲ್ಲಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆ ನಡೆದಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ. ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲು ಮತ್ತು ತಲವಾರು ತೋರಿಸಿ ಅಂದಾಜು 12 ಕೋಟಿ ರು. ಮೌಲ್ಯದ ಚಿನ್ನಾಭರಣ ಹಾಗೂ 5 ಲಕ್ಷ ರು. ನಗದು ದೋಚಿ ಪರಾರಿಯಾಗಿದೆ ಎಂದು ಹೇಳಲಾಗಿದೆ.

ಕೇವಲ 5 ನಿಮಿಷಗಳ ಅವಧಿಯಲ್ಲಿ ನಡೆದ ಈ ದರೋಡೆಯ ಸುದ್ದಿ ಇಡೀ ಮಂಗಳೂರಿನಲ್ಲಿ ಮಿಂಚಿನಂತೆ ಹರಿದಾಡಿದೆ.ಇದು ರಾಜ್ಯದಲ್ಲಿಯೇ ಈವರೆಗೆ ನಡೆದ ಅತಿದೊಡ್ಡ ಮೊತ್ತದ ಬ್ಯಾಂಕ್ ದರೋಡೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆ ಉಳ್ಳಾಲ ತಾಲೂಕಿನ ಕೆ.ಸಿ. ರೋಡ್‌ ಕೋಟೆಕಾರ್ ಸೇವಾ ಸಹಕಾರಿ ಸಂಘದ ಬ್ಯಾಂಕ್ ಗೆ ನುಗ್ಗಿದ 5 ಮಂದಿ ಮುಸುಕುಧಾರಿ ದರೋಡೆಕೋರರ ತಂಡ, ಗೋಣಿ ಚೀಲ ದಲ್ಲಿ ಚಿನ್ನ, ಹಣ ತುಂಬಿಕೊಂಡು, ಫಿಯೆಟ್ ಲಿನಿಯಾ ಕಾರಿನಲ್ಲಿ ಪರಾರಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭ ಉಳ್ಳಾಲ ಪೊಲೀಸರು ಭದ್ರತೆಗಾಗಿ ಅತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಧ್ಯಾಹ್ನದ ವೇಳೆ ಹಲವು ಮಂದಿ ಶುಕ್ರವಾರದ ನಮಾಜ್‌ಗೆ ಹೋಗಿರುವುದಲ್ಲದೇ  ಬ್ಯಾಂಕ್‌ನ ಸಿಸಿಟೀವಿ ಕೂಡ ಕೆಲಸ ಮಾಡುತ್ತಿರಲಿಲ್ಲ.ಇದು ದರೋಡೆಕೋರರಿಗೆ ಫ್ಲಸ್‌ ಪಾಯಿಂಟ್‌ ಆಗಿತ್ತು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಯವರು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು?. ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ?. ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್‌ಗಳನ್ನು‌ ಯಾಕೆ ಬಿಗಿಗೊಳಿಸಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಎಲ್ಲ ಟೋಲ್‌ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು.ಈ ಬಗ್ಗೆ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಖಡಕ್ ಸೂಚನೆ ನೀಡಿದ್ದಾರೆ.ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

Related posts

ಎಸ್ ಎಸ್ ಎಫ್ ಸುಳ್ಯ ವಿಭಾಗ ವತಿಯಿಂದ 308ನೇ ರಕ್ತದಾನ ಶಿಬಿರ, ಸಂಘಟನೆಯ ಕಾರ್ಯಕ್ಕೆ ಶಾಸಕಿ ಕು.ಭಾಗೀರಥಿ ಮುರುಳ್ಯ ಶ್ಲಾಘನೆ

ಘಟಪ್ರಭಾ ನದಿ ಪ್ರವಾಹಕ್ಕೆ 800ಕ್ಕೂ ಹೆಚ್ಚು ಮನೆಗಳು ಜಲಾವೃತ..! ಜಲಪ್ರಳಯಕ್ಕೆ ತತ್ತರಿಸಿದ ಊರು..!

ಈ ಕೆಲಸಕ್ಕೆ ನೀವು ಏಕೆ ಸೂಕ್ತ? ಎಂದು ಕಂಪನಿ ಕೇಳಿದ ಪ್ರಶ್ನೆಗೆ ಆತ ನೀಡಿದ ಉತ್ತರ ಎಲ್ಲೆಡೆ ವೈರಲ್..! ಸಂಸ್ಥೆಯ ಮುಖ್ಯಸ್ಥೆ ಹಂಚಿಕೊಂಡ ಅರ್ಜಿಯಲ್ಲೇನಿದೆ..?