ನ್ಯೂಸ್ ನಾಟೌಟ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರವು ಅಧಿಕೃತ ಅಧಿಸೂಚನೆ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆ.07 ರಂದು ಅಥವಾ ಅದಕ್ಕಿಂತ ಮೊದಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರವು 219 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಚಾಮರಾಜನಗರದಲ್ಲೇ ಉದ್ಯೋಗ ಸ್ಥಳ ಇರಲಿದೆ.
ಅಂಗನವಾಡಿ ಕಾರ್ಯಕರ್ತೆಯರ 77 ಹುದ್ದೆಗಳು ಖಾಲಿ, ಅಂಗನವಾಡಿ ಸಹಾಯಕಿಯರ 142 ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ತೇರ್ಗಡೆ ಹೊಂದಿರುವುದು ಖಡ್ಡಾಯ ಮತ್ತು ಅಂಗನವಾಡಿ ಸಹಾಯಕಿಯರು 10 ನೇ ತರಗತಿ ತೇರ್ಗಡೆ ಹೊಂದಿರಬೇಕು ಎಂದು ತಿಳಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
WCD ಚಾಮರಾಜನಗರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು https://karnemakaone.kar.nic.in/abcd/home.aspx ಈ ಲಿಂಕ್ ಬಳಸಿ. ಅಗತ್ಯ ದಾಖಲೆಗಳನ್ನು ಮೊದಲೇ ಸಿದ್ದವಾಗಿರಿಸಿಕೊಳ್ಳುವುದು ಉತ್ತಮ.