ನ್ಯೂಸ್ ನಾಟೌಟ್ :ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ರಾಜ್ಯಶಾಸ್ತ್ರ ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು.
ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಮಮತಾ ಕೆ. ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಮತದಾನದ ದಿನಾಚರಣೆಯ ಔಚಿತ್ಯತೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುಮಾರಿ ಕವಿತ ದ್ವಿತೀಯ ಬಿ.ಎ ವಂದನಾರ್ಪಣೆಗೈದರು, ಕುಮಾರಿ ಸುಜನ ದ್ವಿತೀಯ ಬಿ.ಎ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಕಾಲೇಜಿನ ಬೋಧಕ-ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.