ಕೆವಿಜಿ ಕ್ಯಾಂಪಸ್‌

ಸುಳ್ಯ: ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಆಯೋಜನೆ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವತಿಯಿಂದ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಶನಿವಾರ (ಜ 25) ಕಾಲೇಜಿನಲ್ಲಿ ಆಯೋಜಿಸಲಾಯಿತು. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬೀದಿ ನಾಟಕ ಮಾನವ ಸರಪಳಿ ಜಾಥ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್ ಡಿ.ವಿ., ಎನ್ಎಸ್ಎಸ್ ಯೋಜನಾಧಿಕಾರಿ ಡಾ. ಪ್ರಮೋದ ಪಿ.ಎ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ ಚಿದಾನಂದರ ಜೊತೆ ಹೊಸ ವರ್ಷಾಚರಣೆ, ಸಹೋದ್ಯೋಗಿಗಳಿಗೆ ಅಧ್ಯಕ್ಷರಿಂದ ಕಿವಿಮಾತು

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆಯುರ್ವೇದ ಸಪ್ತಾಹ ಕಾರ್ಯಕ್ರಮ