ನ್ಯೂಸ್ ನಾಟೌಟ್ : ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್ ವೈದ್ಯ ಎಚ್ಚರಿಕೆ ನೀಡಿದ್ದಾರೆ.
ಕಾರವಾರದಲ್ಲಿ ಮಾತನಾಡಿದ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಸು ಕಳ್ಳತನ ಹಲವು ವರ್ಷಗಳಿಂದ ನಡೆದುಬಂದಿದೆ. ಇಂತಹ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. ಇನ್ನೂ ಮೇಲೆಯೂ ಇಂತಹ ಘಟನೆಗಳು ಮರುಕಳಿಸಿದರೇ ನಾವು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.
ಇನ್ನು ಶಾಸಕ ದಿನಕರ್ ಶೆಟ್ಟಿ ವಿರುದ್ಧ ಅಸಮಾಧಾನ ಹೊರಹಾಕಿದ ಸಚಿವರು, ಕುಮಟಾದಲ್ಲೂ ಗೋಹತ್ಯೆ ನಡೆದಿದೆ. ಹಾಗಂತಾ ದಿನಕರ ಶೆಟ್ಟಿ ದಿನಕರ ಖಾನ್ ಆಗಿಬಿಡ್ತಾರಾ? ಮಾತನಾಡುವಾಗ ನೋಡಿಕೊಂಡು ಮಾತನಾಡಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಗೋಹತ್ಯೆಗಳು ನಡೆದಿವೆ. ಬಿಜೆಪಿ ಕೆಟ್ಟ ರಾಜಕಾರಣ ಮಾಡುವುದನ್ನು ಬಿಡಬೇಕು. ನಮ್ಮ ಸರ್ಕಾರದಲ್ಲಿ ಗೋಹತ್ಯೆ ಮಾಡಿದ ಆರೋಪಿಗಳ ಬಂಧನವಾಗಿದೆ. ನಾವು ಸುಮ್ಮನೆ ಕುಳಿತಿಲ್ಲ, ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ, ಗೃಹ ಸಚಿವರು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
Click
ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು