ನ್ಯೂಸ್ ನಾಟೌಟ್: ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವಿನ ಸಂಘರ್ಷಕ್ಕೆ ಕಾರಣವಾಗಿರುವ ಗಾಜಾಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.
ಇಸ್ರೇಲ್- ಹಮಾಸ್ ನಡುವಿನ ಕದನ ವಿರಾಮದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಇಸ್ರೇಲ್ನ ಗಾಜಾ ಪಟ್ಟಿಯನ್ನು ಸ್ವಾಧೀನಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ಕುರಿತು ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದು, ಅಚ್ಚರಿ ಎಂದರೆ ಟ್ರಂಪ್ ಈ ಘೋಷಣೆ ಮಾಡುವ ವೇದಿಕೆಯಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಕೂಡ ಉಪಸ್ಥಿತರಿದ್ದರು.
ಅಮೆರಿಕಕ್ಕೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗಿನ ಮಾತುಕತೆಯ ನಂತರ ಟ್ರಂಪ್ ಈ ಬಗ್ಗೆ ಘೋಷಣೆ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಪುನರಾಭಿವೃದ್ಧಿ ಯೋಜನೆಯಡಿ ಅಮೆರಿಕ ಗಾಜಾ ಪಟ್ಟಿಯನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪುನರಾಭಿವೃದ್ಧಿ ಯೋಜನೆಯಡಿಯಲ್ಲಿ ಪ್ಯಾಲೆಸ್ತೀನಿಯರನ್ನು ಬೇರೆಡೆ ಪುನರ್ವಸತಿಗೊಳಿಸಿದ ನಂತರ ಅಮೆರಿಕವು ಗಾಜಾವನ್ನು ಸ್ವಾಧೀನಪಡಿಸಿಕೊಳ್ಳುತ್ತದೆ. ಈ ಯೋಜನೆಯಡಿ ಪ್ಯಾಲೆಸ್ತೀನಿಯರನ್ನು ಬೇರೆಡೆ ಪುನರ್ವಸತಿ ಮಾಡಲಾಗುವುದು. ಈ ಯೋಜನೆಯು ಎನ್ಕ್ಲೇವ್ ಅನ್ನು “ಮಧ್ಯಪ್ರಾಚ್ಯದ ರಿವೇರಿಯಾ” ಆಗಿ ಪರಿವರ್ತಿಸಲಿದೆ. ಅಮೆರಿಕ ಗಾಜಾ ಪಟ್ಟಿಯನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಮತ್ತು ನಾವು ಗಾಜಾದೊಂದಿಗೆ ಕೆಲಸ ಮಾಡುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.