ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಶಾಲಾ ವಿದ್ಯಾರ್ಥಿನಿ ಮೇಲೆ 3 ಶಿಕ್ಷಕರಿಂದಲೇ ಅತ್ಯಾಚಾರ..! ಸ್ಥಳೀಯರಿಂದ ಪ್ರತಿಭಟನೆ

ನ್ಯೂಸ್ ನಾಟೌಟ್: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಪ್ರಾಂಶುಪಾಲರು ಈ ಬಗ್ಗೆ ಬಾಲಕಿಯ ತಾಯಿಯಲ್ಲಿ ವಿಚಾರಿಸಿದಾಗ ಮಾಹಿತಿ ಬಯಲಾಗಿದೆ. ಈ ಕುರಿತು ಪೊಲೀಸ್ ದೂರು ದಾಖಲಿಸುವಂತೆ ಬಾಲಕಿಯ ತಾಯಿಗೆ ಪ್ರಾಂಶುಪಾಲರು ಸೂಚಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಘಟನೆಯು ಕೃಷ್ಣಗಿರಿಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Related posts

ಮೂಡುಬಿದಿರೆ: ವಿದ್ಯಾರ್ಥಿನಿ ನಿಗೂಢ ನಾಪತ್ತೆ..! ಕಾಲೇಜು ಬಸ್ ನಲ್ಲಿ ಬಂದ 19 ರ ಯುವತಿ ಹೋದದ್ದೆಲ್ಲಿಗೆ..?

ನಾನು ಭಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದ ಆರ್.ಆಶೋಕ್ ..! ಅಷ್ಟಕ್ಕೂ ಬಿಜೆಪಿ ನಾಯಕರ ವಿರುದ್ಧ ಮಂಗಳೂರು ಭಜರಂಗದಳ ನೀಡಿದ ಎಚ್ಚರಿಕೆ ಏನು..?

ಈಕೆ ಅಂದು ಬಾಲನಟಿ ಇಂದು ಐಎಎಸ್ ಆಫೀಸರ್, ರಮೇಶ್​​ ಅರವಿಂದ್ ಜತೆ ಆ ಪುಟ್ಟ ಬಾಲಕಿ ಯಾರು..?