ನ್ಯೂಸ್ ನಾಟೌಟ್: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು (Ordinance) ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.
ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.
ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.
Click
ಲಿಂಕ್ ತೆರೆಯದಿದ್ದರೂ ವಾಟ್ಸ್ ಆ್ಯಪ್ ಖಾತೆಗಳು ಹ್ಯಾಕ್..? ಎಚ್ಚರಿಕೆ ನೀಡಿದ ವಾಟ್ಸ್ ಆ್ಯಪ್..!
ರಜೆ ನೀಡಲು ನಿರಾಕರಿಸಿದ್ದಕ್ಕೆ ಚೂರಿಯಿಂದ ಇರಿದ ಸರ್ಕಾರಿ ನೌಕರ..! ಇಬ್ಬರ ಸ್ಥಿತಿ ಗಂಭೀರ..!
ಮಗನ ಮೃತದೇಹ ಬೇಡವೆಂದು ಊರಿಗೆ ಹೊರಟ ತಾಯಿ..! ಕೇರಳದ ಕುಖ್ಯಾತ ಕಳ್ಳನ ಮೃತದೇಹ ಬೆಂಗಳೂರಿನಲ್ಲಿ ಪತ್ತೆ..!
ಎಷ್ಟೇ ಹೇಳಿದ್ರೂ ಆಕೆಯ ಸಹವಾಸ ಬಿಡದ ಪತಿ..! ಪತಿಯ ಕಾಲು ಮುರಿಯಲು 5 ಲಕ್ಷ ರೂ.ಗೆ ಸುಪಾರಿ ನೀಡಿದ ಪತ್ನಿ..!
‘ಎಟರ್ನಲ್’ ಎಂದು ಹೆಸರು ಬದಲಿಸಿಕೊಂಡ Zomato..! ಹೊಸ ಸೇವೆಗಳು ಸೇರ್ಪಡೆ..!
ಉಡುಪಿ: ಕಲ್ಲಿಗೆ ತಾಗಿ ಮೀನುಗಾರಿಕಾ ಬೋಟ್ ಮುಳುಗಡೆ..! ದೋಣಿಯ ಅಡಿಭಾಗ ಒಡೆದು ಒಳನುಗ್ಗಿದ ನೀರು..!