ಚಿಕ್ಕಮಗಳೂರು

ಕಾರು ಮತ್ತು ಬೈಕ್ ನಡುವೆ ಡಿಕ್ಕಿ,ಅನ್ಯಧರ್ಮಿಯರ ಕಾರು ಅಡ್ಡಹಾಕಿ ಹಲ್ಲೆ ; ಆರೋಪಿಗಳು ಪರಾರಿ,ಗಾಯಾಳುಗಳು ಆಸ್ಪತ್ರೆಗೆ ದಾಖಲು

40
Spread the love

ನ್ಯೂಸ್‌ ನಾಟೌಟ್‌ : ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಶೃಂಗೇರಿಯಿಂದ ವರದಿಯಾಗಿದೆ.ಅದೇ ಸ್ಥಳದಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದಾಗ ಈ ದುರ್ಘಟನೆ ಸಂಭವಿಸಿದೆ.

ಶೃಂಗೇರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು,ಗುಂಪೊಂದು ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಐವರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ ಎಂದು ಆರೋಪಿಸಲಾಗಿದೆ.ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಕೊಪ್ಪ ಮೂಲದ ಕುಟುಂಬ ಮೂರು ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹರಿಹರಪುರ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿಯಾಗಿದೆ. ಈ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪ ಡಿವೈಎಸ್ ಪಿ ಬಾಲಾಜಿ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಬೈಕ್ ಕಾರು ಅಪಘಾತ ಪ್ರಕರಣ ಹಾಗೂ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದ್ದಾರೆ.

See also  ಸರ್ಕಾರಿ ಕಟ್ಟಡವೊಂದರ ಕಾಮಗಾರಿ ಸ್ಥಳದಲ್ಲಿ ನಿರ್ಮಾಣ ಮಾಡಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು,ಮೂವರು ಬಾಲಕರು ಆಟವಾಡುತ್ತಿದ್ದ ವೇಳೆ ದುರಂತ
  Ad Widget   Ad Widget   Ad Widget