ಕೆವಿಜಿ ಕ್ಯಾಂಪಸ್‌

ಸುಳ್ಯ: ರಾಷ್ಟ್ರ ಮಟ್ಟದ ಬೀಚ್ ಕಬಡ್ಡಿಗೆ ಎನ್.ಎಂ.ಸಿ ವಿದ್ಯಾರ್ಥಿ ವಿನಯ್ ರಾವತ್ ಆಯ್ಕೆ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ವಿನಯ್ ರಾವತ್ ಅವರು ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆಯಲಿರುವ 38ನೇ ಅಖಿಲ ಭಾರತೀಯ ರಾಷ್ಟ್ರೀಯ ಬೀಚ್ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಪ್ರಸ್ತುತ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಯವರ ಸಾರಥ್ಯದ ಕೆವಿಜಿ  ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ ನಾಗರಾಜ್ ನಾಯ್ಕ್ ಇವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ

ಸುಳ್ಯ: ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಆಯೋಜನೆ

ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ ಚಿದಾನಂದರ ಜೊತೆ ಹೊಸ ವರ್ಷಾಚರಣೆ, ಸಹೋದ್ಯೋಗಿಗಳಿಗೆ ಅಧ್ಯಕ್ಷರಿಂದ ಕಿವಿಮಾತು