ನ್ಯೂಸ್ ನಾಟೌಟ್: 2025ರ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೆಂಗಳೂರಿನಲ್ಲಿಇಂದು(ಫೆ.11) ಅದ್ಧೂರಿ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ವೀಲ್ ಚೇರ್ ನಲ್ಲೇ ಆಗಮಿಸಿದರು.
ಸಿಎಂಗೆ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಾಯಕರ ನೆರವಿನೊಂದಿಗೆ ಸಿದ್ದರಾಮಯ್ಯ ವೀಲ್ ಚೇರ್ ನಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದಿದೆ. ಅದೇ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ಮಂಡಿ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದರು. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.
ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿ.ಕೆ ಶಿವಕುಮಾರ್, ಉದ್ಯಮಿ ಕಿರಣ್ ಮಜುಂದಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.