ನ್ಯೂಸ್ ನಾಟೌಟ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜಿಗೆ ನೀಡಿರುವ ರಜೆಯನ್ನು ವಿಸ್ತರಿಸಲಾಗಿದೆ.
ಶುಕ್ರವಾರವೂ (ಜು.8 ) ಶೈಕ್ಷಣಿಕ ಸಂಸ್ಥೆಗಳು ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.