Latestಬೆಂಗಳೂರು

5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌..! ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ..!

1.8k
Spread the love

ನ್ಯೂಸ್‌ ನಾಟೌಟ್: ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಬಿಬಿಎಂಪಿಯು (BBMP) 5 ಕೋಟಿ ರೂ. ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ.
ಬೀದಿ ನಾಯಿಗಳನ್ನು ಮಾರಣಾಂತಿಕ ಕಾಯಿಲೆಯಿಂದ ರಕ್ಷಿಸಲು ಹಾಗೂ ಮನುಷ್ಯರಿಗೂ ಈ ಕಾಯಿಲೆ ಹರಡದಂತೆ ತಡೆಗಟ್ಟಲು ವ್ಯಾಕ್ಸಿನ್ ನೀಡಲು ಮುಂದಾಗಿದೆ. ಬಿಬಿಎಂಪಿಯು 1.84 ಲಕ್ಷ ಬೀದಿ ನಾಯಿಗಳಿಗೆ ವ್ಯಾಕ್ಸಿನ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ರೀತಿಯ ಕ್ರಮಕ್ಕೆ ಮುಂದಾಗಿದೆ. ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್‌ ಗಾಗಿ 4.98 ಕೋಟಿ ರೂ. ಖರ್ಚು ಮಾಡುತ್ತಿದೆ. ಪಶುಪಾಲನಾ ವಿಭಾಗವು ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಸಂತಾನಹರಣ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು ನಿಯಮಾನುಸಾರ ನಿರ್ವಹಣೆ ಮಾಡಲಿದೆ ಎನ್ನಲಾಗಿದೆ.

 

See also  ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಸ್ರೋ ವಿಜ್ಞಾನಿಯ ಕಾರಿನ ಗಾಜು ಪುಡಿಗೈದ ಕಿಡಿಗೇಡಿಗಳು..! ಯುವ ವಿಜ್ಞಾನಿಯ ಮೇಲೆ ಎರಗಿದ್ದೇಕೆ..?
  Ad Widget   Ad Widget   Ad Widget