27.7 C
Sullia
Sunday, March 8, 2026

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಿರಿಯ ಸಲಹೆಗಾರರು ಮನೋವೈದ್ಯ ಡಾ. ಟಿ. ಸುಧಾಕರ ಭಟ್ ಅವರು ಮಾನಸಿಕ ಆರೋಗ್ಯದ ಕುರಿತು ಉಪನ್ಯಾಸ ನೀಡಿದರು. ಬಳಿಕ ಮುಖ್ಯ ಅತಿಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮನೋ ವೈದ್ಯಕೀಯ ವಿಭಾಗದ ಮುಖ್ಯಸ್ಥರು ಪ್ರೊ. ಡಾ. ಪೂನಂ ಎಂ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರಶ್ಮಿ ಕೆ.ಮಾನಸಿಕ ಆರೋಗ್ಯದ ವಿವಿಧ ಅಂಶಗಳ ಕುರಿತು ವಿಶೇಷ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಾ.ಸುಪ್ರಿಯಾ ಮತ್ತು ಡಾ. ನವಿತ ಸಂಯೋಜಿಸಿದ ಮಾನಸಿಕ ಆರೋಗ್ಯ ಜಾಗೃತಿ ಕುರಿತಾದ ಪ್ರಹಸನವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸೀನಿಯರ್ ರೆಸಿಡೆಂಟ್ ಡಾ. ಅಮೃತಾ ಅಜಯ್ ಸ್ವಾಗತಿಸಿದರು. ಮನಶಾಸ್ತ್ರಜ್ಞರಾದ ನಮ್ರತಾ ಅವರು ಮುಖ್ಯ ಅತಿಥಿಗಳ ಪರಿಚಯ ವಾಚಿಸಿದರು. ಡಾ. ಅಭಿಜ್ಞಾ ಮತ್ತು ಡಾ. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಅನುಶ್ರಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲರು, ಪ್ರಾದ್ಯಾಪಕರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles