ನ್ಯೂಸ್ ನಾಟೌಟ್: ಮಹಿಳೆಯೊಬ್ಬರು ವಾಟ್ಸಾಪ್ ಸಂದೇಶ ಕಂಡು ಬೆಂಗಳೂರಿನ ವೈದ್ಯರು ಶಾಕ್ ಆಗಿದ್ದಾರೆ. ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಎಂದು ಸೊಸೆ ವೈದ್ಯರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ ಘಟನೆ ನಡೆದಿದೆ. ವೈದ್ಯರ ಕಡೆಯಿಂದ ಅದರ ವಾಟ್ಸಾಪ್ ಸಂದೇಶದ ಸ್ರ್ಕೀನ್ ಶಾಟ್ ವೈರಲ್ ಆಗುತ್ತಿದೆ.
ಬೆಂಗಳೂರು ಮೂಲದ ವೈದ್ಯರಾದ ಡಾ. ಸುನಿಲ್ ಕುಮಾರ್ ಗೆ ಇನ್ ಸ್ಟಾಗ್ರಾಮ್ ನಲ್ಲಿ ಓರ್ವ ಮಹಿಳೆ ಪರಿಚಯವಾಗಿದ್ದಾಳೆ. ಮಹಿಳೆ ಇನ್ ಸ್ಟಾಗ್ರಾಮ್ ಮೂಲಕ ಡಾ. ಸುನಿಲ್ ಕುಮಾರ್ ರ ದೂರವಾಣಿ ಸಂಖ್ಯೆ ಪಡೆದಿದ್ದಾಳೆ. ನಂತರ, ಸೋಮವಾರ (ಫೆಬ್ರವರಿ 17) ರಂದು ಮಹಿಳೆ, ಡಾ. ಸುನಿಲ್ ಕುಮಾರಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿದ್ದಾಳೆ.
ಈ ರೀತಿಯಾಗಿ ಮಹಿಳೆ ಮತ್ತು ವೈದ್ಯರ ನಡುವೆ ಸಂಭಾಷಣೆ ನಡೆದಿದೆ. ಸೊಸೆ ಅತ್ತೆಯನ್ನು ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದಾರೆ. ಆ ಬಳಿಕ ಮಹಿಳೆ ಕೂಡಲೇ ಸಂದೇಶಗಳನ್ನು ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾರೆ ಎನ್ನಲಾಗಿದೆ. ಮಹಿಳೆಯ ಸಂದೇಶ ಓದಿ ಶಾಕ್ ಆದ ವೈದ್ಯ ಸುನಿಲ್ ಕುಮಾರ್ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ.