Latestಕ್ರೈಂವೈರಲ್ ನ್ಯೂಸ್

ನಾಡ ಬಾಂಬ್ ಸ್ಫೋಟಗೊಂಡು ಅಮಾಯಕ ವಿದ್ಯಾರ್ಥಿಗಳ ಕೈ ಛಿದ್ರ..! ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛತೆ ಮಾಡುತ್ತಿದ್ದಾಗ ಘಟನೆ..!

405
Spread the love

ನ್ಯೂಸ್ ನಾಟೌಟ್: ಸ್ವಚ್ಚತಾ ಕಾರ್ಯ ನಡೆಸುವಾಗ ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿಯಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣಿಕನಿಗೆ ಚಾಕು ಇರಿದು ಆರೋಪಿ ಪರಾರಿ..! ಪತ್ನಿಯ ಎದುರಿಗೇ ಪ್ರಾಣ ಬಿಟ್ಟ ಪತಿಯ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ..!

ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

See also  ಧ್ವಜ ತೆರವು ಮಾಡಿದ್ದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ, ಈ ಘಟನೆ ನಡೆದದ್ದೆಲ್ಲಿ..?
  Ad Widget   Ad Widget   Ad Widget   Ad Widget