ನ್ಯೂಸ್ ನಾಟೌಟ್: ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನ ಚಾಮರಾಜನಗರದ ಕೊಳ್ಳೇಗಾಲ (Kollegal) ತಾಲೂಕಿನ ಚಿಕ್ಕಿಂದುವಾಡಿ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ (Mahadeshwar Hill) ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.