Latestದೇಶ-ವಿದೇಶ

ಮಹಾ ಕುಂಭಮೇಳದಿಂದಾಗಿ ಕೇವಲ 45 ದಿನಗಳಲ್ಲಿ 3 ಕೋಟಿ ಭಕ್ತರಿಂದ ಕಾಶಿ ಭೇಟಿ..! ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ನಿಂದ ಮಾಹಿತಿ ಬಿಡುಗಡೆ

634
Spread the love

ನ್ಯೂಸ್‌ ನಾಟೌಟ್ : ಪ್ರಯಾಗ್‌ ರಾಜ್‌ ನಲ್ಲಿ ನಡೆದ ಮಹಾ ಕುಂಭಮೇಳ ಪರಿಣಾಮ ವಾರಣಾಸಿಯ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ ದಾಖಲೆಯ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಕಳೆದ 45 ದಿನಗಳಲ್ಲಿ ಮೂರು ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಹೇಳಿದೆ.

ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಬಿಡುಗಡೆ ಮಾಡಿದ ಮಾಹಿತಿಗಳ ಪ್ರಕಾರ, ಪ್ರತಿದಿನ ಸರಾಸರಿ ಆರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದು ದೇವಾಲಯದ ಇತಿಹಾಸದಲ್ಲಿ ಅತಿ ಹೆಚ್ಚು ದರ್ಶನ ಪಡೆದ ಭಕ್ತರ ಸಂಖ್ಯೆಯಾಗಿದೆ. ಶ್ರಾವಣಕ್ಕಿಂತ ಮಾಘ ಮತ್ತು ಫಾಲ್ಗುಣದಲ್ಲಿ ಹೆಚ್ಚಿನ ಭಕ್ತರು ದರ್ಶನ ಪಡೆದಿದ್ದಾರೆ.

ಮಹಾಶಿವರಾತ್ರಿ ಮತ್ತು ಮೌನಿ ಅಮಾವಾಸ್ಯೆಯಂದು ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೌನಿ ಅಮಾವಾಸ್ಯೆಯಂದು 11 ಲಕ್ಷಕ್ಕೂ ಹೆಚ್ಚು ಭಕ್ತರು ಬಂದಿದ್ದರು. ಮಹಾಶಿವರಾತ್ರಿಯಂದು 46 ಗಂಟೆಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಕ್ತರು ವಿಶ್ವನಾಥನ ದರ್ಶನ ಪಡೆದಿದ್ದಾರೆ.

ಜನವರಿ 13ರಿಂದ ಫೆಬ್ರವರಿ 19ರ ನಡುವೆ, ಭಕ್ತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ ಎಂದು ಹೇಳಲಾಗಿದೆ. ಫೆಬ್ರವರಿ 27ರಂದು ಬಿಡುಗಡೆಯಾದ ಮಾಹಿತಿಯ ಪ್ರಕಾರ, ಈ ಸಂಖ್ಯೆ ಮೂರು ಕೋಟಿ ತಲುಪಿದೆ. ಅಂದರೆ ಕೇವಲ ಎಂಟು ದಿನಗಳಲ್ಲಿ (ಫೆಬ್ರವರಿ 20ರಿಂದ 27ರವರೆಗೆ) ಒಂದು ಕೋಟಿಗೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ.

See also  ಶೌಚಾಲಯದಲ್ಲಿರುವ ಕನ್ನಡಿಯಿಂದ ಕಾಲೇಜ್‌ಗೆ ಸಮಸ್ಯೆ!!ಪ್ರಿನ್ಸಿಪಾಲರ ಈ ನಿರ್ಧಾರಕ್ಕೆ ಭಾರಿ ಮೆಚ್ಚುಗೆ!ಶೌಚಾಲಯದ ಒಂದು ಕನ್ನಡಿ ಕಥೆ !!
  Ad Widget   Ad Widget   Ad Widget