ನ್ಯೂಸ್ ನಾಟೌಟ್: ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ತುಮಕೂರಿನ ಬಳಿಕ ನಾಮಚಿಲುಮೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿತ್ತು. ತುಮಕೂರು ಎಸಿಎಫ್ ಪವಿತ್ರಾ ನೇತೃತ್ವದಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿತ್ರೀಕರಣವನ್ನು ಬಂದ್ ಮಾಡಿಸಿದ್ದಲ್ಲದೆ, ಚಿತ್ರೀಕರಣಕ್ಕೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.
ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಶೂಟಿಂಗ್, ತರುಣ್ ಸುಧೀರ್ ಕ್ರಿಯೇಟಿವ್ ಹೆಸರಿನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣ, ಮತ್ತು ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು. ಸುಮಾರು 50-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅರಣ್ಯ ಇಲಾಖೆ ದಾಳಿ ವೇಳೆ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವ್ಯಾನ್, ಕ್ಯಾಮರಾ ಲೈಟ್, ಅಡುಗೆ ಸಾಮಗ್ರಿ, ಚೇರ್ ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆಯಲಾಗಿದೆ.
ಅಸಲಿಗೆ ಚಿತ್ರತಂಡ ತರುಣ್ ಸುಧೀರ್ ಪ್ರೊಡಕ್ಷನ್ಸ್ ಹೆಸರಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಕೋರಿ ಈ ಮೊದಲೇ ಅರ್ಜಿ ಹಾಕಿತ್ತಂತೆ. ಆದರೆ ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಫೆಬ್ರವರಿ 4, 18, 20ರಂದು ಶೂಟಿಂಗ್ಗೆ ಅನುಮತಿ ನೀಡುವಂತೆ ಪತ್ರ ಬರೆಯಲಾಗಿತ್ತು. ಆದರೆ ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಆದರೂ ಚಿತ್ರತಂಡ ಚಿತ್ರೀಕರಣ ಶುರು ಮಾಡಿತ್ತು. ಇದೇ ಕಾರಣಕ್ಕೆ ಅರಣ್ಯ ಇಲಾಖೆಯವರು ಈಗ ಚಿತ್ರೀಕರಣ ಬಂದ್ ಮಾಡಿಸಿ, ಚಿತ್ರೀಕರಣಕ್ಕೆ ಬಳಸಿದ್ದ ವಸ್ತುಗಳನ್ನು ಸೀಜ್ ಮಾಡಿಸಿದ್ದಾರೆ.
ಇದನ್ನೂ ಓದಿ: 30 ಅಡಿ ಆಳದ ಚರಂಡಿಗೆ ಕಾರು ಬಿದ್ದು ವ್ಯಕ್ತಿ ಸಾವು..! ಗೂಗಲ್ ಮ್ಯಾಪ್ ಅವಾಂತರ..?