ನ್ಯೂಸ್ ನಾಟೌಟ್ : ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಬೇಲೂರು ಪಟ್ಟಣದ ಬಳಿ ನಡೆದಿದೆ.
ಮೃತರಲ್ಲಿ ಇಬ್ಬರು ಗುರುತು ಪತ್ತೆಯಾಗಿದ್ದು, ಅವರನ್ನು ಆಶಾ, ದೀಪು ಎಂದು ಗುರುತಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆಯಾಗಿಲ್ಲ.
ಪಾಳು ಬಿದ್ದ ಕಟ್ಟಡದ ಕೆಳಗೆ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದ ವೇಳೆ ದಿಢೀರ್ ಕಟ್ಟಡ ಕುಸಿದಿದೆ. ಪರಿಣಾಮ ವ್ಯಾಪಾರ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.