Latestರಾಜಕೀಯರಾಜ್ಯವೈರಲ್ ನ್ಯೂಸ್

ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ..! ಅರಣ್ಯ ಸಚಿವರಿಂದ ಆದೇಶ

225
Spread the love

ನ್ಯೂಸ್ ನಾಟೌಟ್: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ.

ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಅರ್ಧಂಬರ್ಧ ಖಾಲಿಯಾದ ಸೋಪುಗಳನ್ನು ಕವರ್‌ ಗಳಲ್ಲಿ ಹಾಕಿ ನದಿಯಲ್ಲೇ ಬಿಡುತ್ತಿದ್ದರು. ಇದರಿಂದ ನದಿ ನೀರಿನಲ್ಲಿ ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಈ ಕ್ರಮ ಕೈಗೊಂಡಿದೆ.

ನದಿ ದಡಗಳಲ್ಲಿ ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಆದೇಶ ಹೊರಡಿಸಿದ್ದಾರೆ.

See also  ರಾಮ ಮಂದಿರಕ್ಕೆ ಭೇಟಿ ನೀಡಿದ ಇಸ್ರೇಲ್ ರಾಯಭಾರಿ, ಯಾತ್ರಿಕರ ಸಂಖ್ಯೆ ನೋಡಿ ಅಚ್ಚರಿ ಪಟ್ಟ ಅಧಿಕಾರಿ
  Ad Widget   Ad Widget   Ad Widget