ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಸಹಯೋಗದೊಂದಿಗೆ ಮಾ. 11 ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಮ್ ಎಮ್ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ ಗೀತಾ ದೊಪ್ಪ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಹದಿಹರೆಯದ ಅರೋಗ್ಯ ಸಮಸ್ಯೆಗಳು ಅಗತ್ಯತೆಗಳು ಹಾಗೂ ಸಮಸ್ಯೆಗಳಿಗೆ ಪರಿಹಾರಗಳನ್ನು ಸವಿವರವಾಗಿ ತಿಳಿಸಿದರು. ಜೊತೆಗೆ ಮುಟ್ಟಿನ ಸಮಯದಲ್ಲಾಗುವ ಸಮಸ್ಯೆಗಳು, ಖಿನ್ನತೆ ಹಾಗೂ ಹಲವಾರು ವಿಷಯಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪ್ರತಿ ದಿನ ಕನಿಷ್ಠ 15 ನಿಮಿಷಗಳ ಕಾಲ ಧ್ಯಾನ ಹಾಗೂ ಎಕ್ಸರ್ಸೈಜ್ ಮಾಡುವಂತೆ ಕರೆ ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ನಿರ್ದೇಶಕಿ ಡಾ ಮಮತಾ ಕೆ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಎಮ್ ಕಾರ್ಯಕ್ರಮ ನಿರೂಪಿಸಿದರು.ಶ್ರೀಲಯ ದ್ವಿತೀಯ ಬಿ ಎ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು ಉಪನ್ಯಾಸಕರು, ವಿದ್ಯಾರ್ಥಿನಿಯರು, ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.