Latestದೇಶ-ವಿದೇಶರಾಜಕೀಯ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದದ್ದೇಕೆ ತಮಿಳುನಾಡು ಸರ್ಕಾರದ ನಿಯೋಗ..? ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ದೂರವಾಣಿ ಮೂಲಕ ಸಿದ್ದರಾಮಯ್ಯ ಜೊತೆ ಚರ್ಚೆ..!

660

ನ್ಯೂಸ್ ನಾಟೌಟ್: ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಳಿಕೊಂಡ, ರಾಜಕೀಯ ಬೆಳವಣಿಗೆ ನಡೆದಿದೆ.

ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಚರ್ಚಿಸಿದರು. ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲವನ್ನೂ ಸೂಚಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಮ್ಮ ನನ್ನ ಐಸ್‌ ಕ್ರೀಂ ತಿಂದ್ರು, ಅವರನ್ನು ಬಂಧಿಸಿ ಎಂದು ಪೊಲೀಸರಿಗೆ ಕರೆಮಾಡಿದ ಪುಟ್ಟ ಬಾಲಕ..! ಮನೆಗೆ ಬಂದ ಪೊಲೀಸರು..!

See also  20 ವರ್ಷಗಳ ಬಳಿಕ ಮತ್ತೆ ಯೋಗರಾಜ್ ಭಟ್ ಸಿನಿಮಾದಲ್ಲಿ ಮೋಹಕ ತಾರೆ!!ದುಂಡು ಮುಖದ ಚೆಲ್ವೆಯನ್ನು ತೆರೆ ಮೇಲೆ ಕಾಣಲು ಸಜ್ಜಾದ ಅಭಿಮಾನಿಗಳು!
  Ad Widget   Ad Widget   Ad Widget   Ad Widget   Ad Widget   Ad Widget