ನ್ಯೂಸ್ ನಾಟೌಟ್: ಅಪ್ರಾಪ್ತೆಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಫೋನ್ ನಲ್ಲಿಯೂ ಕಿರಿಕಿರಿ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (೩೫) ಎಂದು ಗುರುತಿಸಲಾಗಿದೆ.
ಈತ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಂಗಡಿಗೆ ಹುಡುಗಿ ಬಂದಾಗಲೆಲ್ಲ ಈತ ಆಕೆಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ. ಅಲ್ಲದೆ ಜು.೮ರಂದು ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದಾಗ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೂರು ಮಹಿಳಾ ಠಾಣಾ ಪೊಲೀಸರು ಆತನನ್ನು ಅರೆಸ್ಟ್ ಮಾಡಿ ಠಾಣೆಗೆ ಕರೆ ತಂದಿದ್ದಾರೆ ಎಂದು ವರದಿಯಾಗಿದೆ.